ಬೆಂಗಳೂರು, ಮಾರ್ಚ್ 20: ಕರ್ನಾಟಕ ರಾಜ್ಯದಲ್ಲಿ ಪ್ರಚಂಡ ಬಿಸಿಲಿನ ಬೇಗೆಗೆ ಜನರು ಬೇಸತ್ತಿದ್ದಾರೆ. ಇದೇ ಸಮಯದಲ್ಲಿ, ರಾಜ್ಯದ ಹಲವು ಜಿಲ್ಲೆಗಳಲ್ಲಿ ಸ್ವಲ್ಪ ಮಳೆ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇದರಿಂದಾಗಿ ಕರ್ನಾಟಕದ ಜನತೆ ಸ್ವಲ್ಪ ಉಸಿರು ಬಿಟ್ಟಿದ್ದಾರೆ. ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದಿನಿಂದ ನಾಲ್ಕು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ
ಇತ್ತೀಚೆಗೆ ಕರ್ನಾಟಕದಾದ್ಯಂತ ಗರಿಷ್ಠ ತಾಪಮಾನದಲ್ಲಿ ಗಮನಾರ್ಹ ಏರಿಕೆ ಕಂಡುಬಂದಿದೆ. ಆದರೆ, ರಾಜ್ಯದ ಹಲವು ಜಿಲ್ಲೆಗಳಲ್ಲಿ ಸ್ವಲ್ಪ ಮಳೆಯಾಗಲಿದ್ದು, ಜನರು ಸಂತೋಷದಿಂದಿದ್ದಾರೆ. ಇಂದು ದಕ್ಷಿಣ ಕನ್ನಡ, ಹಾಸನ, ಕೊಡಗು, ಮೈಸೂರು, ಶಿವಮೊಗ್ಗ ಜಿಲ್ಲೆಗಳ ಕೆಲವು ಪ್ರದೇಶಗಳಲ್ಲಿ ಸ್ವಲ್ಪ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಉಳಿದ ಜಿಲ್ಲೆಗಳಲ್ಲಿ ಒಣ ಹವೆ ಮುಂದುವರೆಯಲಿದೆ.
ಮಾರ್ಚ್ 22 ರಿಂದ 26ರವರೆಗೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮಾರ್ಚ್ 22 ರಂದು ದಕ್ಷಿಣ ಕನ್ನಡ, ಚಿಕ್ಕಮಗಳೂರು, ಮೈಸೂರು, ಕೊಡಗು, ಹಾಸನ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ರಾಮನಗರ, ಮಂಡ್ಯ, ಬೀದರ್, ಕಲಬುರಗಿ, ಯಾದಗಿರಿ, ವಿಜಯಪುರ ಮತ್ತು ರಾಯಚೂರು ಜಿಲ್ಲೆಗಳ ಕೆಲವು ಪ್ರದೇಶಗಳಲ್ಲಿ ಗುಡುಗು ಮಿಂಚು ಸಹಿತ ಸ್ವಲ್ಪ ಮಳೆಯಾಗಲಿದೆ ಎಂದು ತಿಳಿಸಲಾಗಿದೆ.
ಮಾರ್ಚ್ 23ರಿಂದ ಒಂದು ವಾರದವರೆಗೆ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಇದರ ಜೊತೆಗೆ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲೂ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ರಾಜ್ಯದ ಕರಾವಳಿ, ಮಲೆನಾಡು ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಇಂದು ಮತ್ತು ಮಾರ್ಚ್ 22 ರಂದು ಗುಡುಗು, ಮಿಂಚು ಮತ್ತು ಬಿರುಗಾಳಿ ಸಹಿತ ಗಾಳಿಯ ವೇಗ ಗಂಟೆಗೆ 30-40 ಕಿಮೀ ತಲುಪುವ ಸಾಧ್ಯತೆಯಿದೆ. ಇದರ ಜೊತೆಗೆ, ಅಲ್ಲಲ್ಲಿ ಚದುರಿದಂತೆ ಸಾಧಾರಣ ಮಳೆಯಾಗಲಿದೆ. ಉಳಿದ ದಿನಗಳಲ್ಲಿ ಒಣ ಹವೆಯಿರುವ ನಿರೀಕ್ಷೆಯಿದೆ. ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಇಂದು ಬಿಸಿಲು ಹೆಚ್ಚಾಗಿರುವ ಸಾಧ್ಯತೆಯಿದೆ. ಹೀಗಾಗಿ, ಜನರು ಮುನ್ನೆಚ್ಚರಿಕೆ ವಹಿಸಲು ಸೂಚನೆ ನೀಡಲಾಗಿದೆ.